ಸುಬ್ರಹ್ಮಣ್ಯ: ಟೆಂಪೋ ಟ್ರಾವೆಲ್ಲರ್ – ಇಂಡಿಕಾ ಕಾರು ನಡುವೆ ಢಿಕ್ಕಿ ► ಮಗು ಸೇರಿದಂತೆ ಐವರು ಗಂಭೀರ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಎ.22. ಇಂಡಿಕಾ ಕಾರು ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ನಡೆದಿದೆ.







ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇಂಡಿಕಾ ಕಾರು ನಡುವೆ ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಸೇರಿ ಐವರ ಸ್ಥಿತಿ ಗಂಭೀರವಾಗಿದ್ದು, 108 ಆಂಬ್ಯುಲೆನ್ಸ್‌ ಮೂಲಕ ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top