ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ



(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು– ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ ನೊಂದ ಪ್ರೇಮಿಗಳು ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು.







ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗೋಣವೆಂದು ನಿರ್ಧರಿಸಿದ್ದರು.ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಆದರೆ ಜಾತಿ ಕಾರಣವೊಡ್ಡಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.






ಮದುವೆಗೆ ಪೋಷಕರು ಒಪ್ಪದ ಕಾರಣ ನೊಂದಿದ್ದ ಪ್ರೇಮಿಗಳು ಆತಹತ್ಯೆಗೆ ನಿರ್ಧರಿಸಿದ್ದಾರೆ. ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ.ನಂತರ ಬೈಕ್‌ನಲ್ಲಿ ತನ್ನ ಪ್ರಿಯತಮೆ ಶ್ವೇತಾಳನ್ನು ಸತೀಶ್‌ ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌ ನಿಲ್ಲಿಸಿದ್ದಾನೆ.

ನಂತರ ಕೋಲಾರದಿಂದ ಬೆಂಗಳೂರಿಗೆ ಹೊರಡುವ ರೈಲು ಬರುವುದನ್ನೇ ಕಾದು ರೈಲು ಬರುತ್ತಿದ್ದಂತೆ 6.30 ರ ಸುಮಾರಿನಲ್ಲಿ ಇಬ್ಬರೂ ಕೈ-ಕೈ ಹಿಡಿದು ಹಳಿ ಮೇಲೆ ಹಾರಿ ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಅವರ ಪೋಷಕರುಗಳಿಗೆ ಮಾಹಿತಿ ರವಾನಿಸಿದ್ದಾರೆ.
ಈ ಬಗ್ಗೆ ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

error: Content is protected !!
Scroll to Top