ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರಾವಳಿಗೆ ► ಏಪ್ರಿಲ್ 27 ರಂದು ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.22. ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಭರ್ಜರಿ ರೋಡ್‌ ಶೋ ನಡೆಸಲು ಸಿದ್ಧತೆ ನಡೆಸಿದ್ದಾರೆ.

ಏಪ್ರಿಲ್ 26 ಹಾಗೂ 27 ರಂದು ಎರಡು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿಯವರು ಎಪ್ರಿಲ್ 27 ರಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಆ ಬಳಿಕ ಕೊಡಗಿನ ಗೋಣಿಕೊಪ್ಪಲಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Also Read  ಅನಾರೋಗ್ಯದಿಂದ ಬಳಲುತ್ತಿದ್ದ ಗೃಹರಕ್ಷಕಿ ಜಯಂತಿಯವರ ಆರೋಗ್ಯ ವಿಚಾರಿಸಿದ ಡಾ.ಚೂಂತಾರು

error: Content is protected !!
Scroll to Top