ಭಾರೀ ಗಾಳಿ – ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್ ಮರ ► ತಾಯಿ – ಮಗಳು ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಹಾಸನ, ಎ.23. ಜಿಲ್ಲೆಯ ವಿವಿಧೆಡೆ ಸುರಿದ ಭಾರೀ ಗಾಳಿ ಮಳೆಗೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ತಾಯಿ – ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸಕಲೇಶಪುರದಲ್ಲಿ ಭಾನುವಾರದಂದು ನಡೆದಿದೆ.

ಮೃತ ದುರ್ದೈವಿಗಳನ್ನು ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದ ಚಿನ್ನಮ್ಮ ಹಾಗೂ ಪುತ್ರಿ ಪ್ರಫುಲ್ಲಾ ಎಂದು ಗುರುತಿಸಲಾಗಿದೆ. ಇವರು ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದಾಗ ಕೊಡ್ಲಿಪೇಟೆ – ಬಾಳ್ಳುಪೇಟೆ ರಸ್ತೆಯಲ್ಲಿದ್ದ ಬೃಹತ್ ಮರವು ಇವರಿದ್ದ ಕಾರಿನ ಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಜಿಲ್ಲಾ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಭಾರೀ ಗಾಳಿಯಿಂದ ರಸ್ತೆಗೆ ಬೃಹತ್ ಮರ ಉರುಳಿದ ಪರಿಣಾಮ ಕೆಲ ಸಮಯ ವಾಹನ ಸಂಚಾರಕ್ಕೂ ಅಡ್ಡಿಯಾಗಿತ್ತು.

Also Read  ಸ್ಯಾಮ್ ಸಂಗ್ ಗೆಲಾಕ್ಸಿ ಎಸ್23 ಸರಣಿ ಭಾರತದಲ್ಲಿ ಬಿಡುಗಡೆ

error: Content is protected !!
Scroll to Top