ಬೆಳ್ಳಂಬೆಳಗ್ಗೆ ಮುರಿದು ಬಿದ್ದ ದುರ್ಗಾಂಬಿಕಾ ದೇವಸ್ಥಾನದ ಬಳಿಯ ಅಶ್ವತ್ಥ ಮರದ ಕೊಂಬೆ ► ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿ ಕೆಲಕಾಲ ಬಂದ್

(ನ್ಯೂಸ್ ಕಡಬ) newskadaba.com ಕಡಬ, ಎ.24. ಇಲ್ಲಿನ ದುರ್ಗಾಂಬಿಕಾ ದೇವಸ್ಥಾನದ ಬಳಿಯಿರುವ ಬೃಹತ್ ಅಶ್ವತ್ಥ ಮರದ ಕೊಂಬೆಯೊಂದು ಮುರಿದು ರಸ್ತೆಗಡ್ಡವಾಗಿ ಬಿದ್ದ ಪರಿಣಾಮ ಕೆಲಕಾಲ ರಸ್ತೆ ತಡೆಯುಂಟಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಬೆಳಿಗ್ಗಿನ ಸಮಯವಾದ್ದರಿಂದ ದೇವಸ್ಥಾನಕ್ಕೆ ಬರುವ ಮತ್ತು ನ್ಯೂಸ್ ಪೇಪರ್ ಖರೀದಿಸಲು ಹಾಗೂ ವಾಹನ ಸಂಚಾರವಿರುವ ಪ್ರದೇಶವಾಗಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಳಿಕ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರು ಸೇರಿ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Scroll to Top