ಪಾಟ್ನಾ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿ; ನಾಲ್ವರು ಸಾವು , ಹಲವರಿಗೆ ಗಾಯ



(ನ್ಯೂಸ್ಕಡಬ) newskadaba.com,  .03 ಪಾಟ್ನಾ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಶುಕ್ರವಾರ(ಅ.03) ಸಂಭವಿಸಿದೆ.





ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಶುಕ್ರವಾರ ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ತೆರಳುತ್ತಿತ್ತು. ಈ ರೈಲು ಪೂರ್ಣಿಯಾ ಪಟ್ಟಣದ ಸಮೀಪ ಮೇಳವೊಂದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿ ಮರಳುತ್ತಿದ್ದವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.






ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೋ? ಅಥವಾ ಜನರು ಹೈಸ್ಪೀಡ್ ರೈಲನ್ನು ನಿರ್ಲಕ್ಷಿಸಿ ಕ್ರಾಸಿಂಗ್ ದಾಟಲು ಪ್ರಯತ್ನಿಸಿದ್ದರೋ? ಎಂಬುದರ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸಲಿದ್ದಾರೆ.

error: Content is protected !!
Scroll to Top