ಪುತ್ತೂರು: ನಿರ್ಮಾಣ ಹಂತದ ಕಟ್ಟಡದ ಮೇಲೆ ಗುಡ್ಡ ಕುಸಿತ ► ಇಬ್ಬರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಎ.24. ನಿರ್ಮಾಣ ಹಂತದ ಕಟ್ಟಡದ ಮೇಲೆ ಮಣ್ಣು ಕುಸಿದ ಪರಿಣಾಮ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನಲ್ಲಿ ಮಂಗಳವಾರದಂದು ನಡೆದಿದೆ.

ಮೃತರನ್ನು ಉತ್ತರ ಕರ್ನಾಟಕ ಮೂಲದವರೆಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಇಲ್ಲಿನ ನೆಲ್ಲಿಕಟ್ಟೆ ಅನಿತಾ ಆಯಿಲ್ ಮಿಲ್ ಬಳಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಕಾಮಗಾರಿ ವೇಳೆ ಗುಡ್ಡ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಣ್ಣಿನಡಿ ಸಿಲುಕಿರುವ ಕಾರ್ಮಿಕರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top