ಉಡುಪಿ ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಭಾರಿ ಅಗ್ನಿ ಅವಘಡ: ಅಪಾರ ಪ್ರಮಾಣದ ಹಾನಿ



(ನ್ಯೂಸ್ಕಡಬ) newskadaba.com,  ಅ.04 ಉಡುಪಿ: ನಗರಸಭೆಗೆ ಸೇರಿದ ಅಲೆವೂರು ಕಸ ವಿಲೇವಾರಿ ಘಟಕದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ನಗರದ ತ್ಯಾಜ್ಯವನ್ನು ಸಂಗ್ರಹಿಸಿ ಸಂಸ್ಕರಿಸುವ ಈ ಘಟಕವು ಘಟನೆಯಿಂದ ತೀವ್ರವಾಗಿ ಹಾನಿಗೊಳಗಾಗಿದೆ.





ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯ ನಿವಾಸಿಗಳ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.






ಮೂಲಗಳ ಪ್ರಕಾರ, ಕಸದ ರಾಶಿಯಿಂದಲೇ ಅಗ್ನಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ. ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.

.

error: Content is protected !!
Scroll to Top