ಕೊನೆಯ ಕ್ಷಣದಲ್ಲಿ ಸುಳ್ಯ ಕ್ಷೇತ್ರದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದ ಎಸ್ಡಿಪಿಐ ► ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಸುಳ್ಯ, ಎ.24. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಎಸ್ಡಿಪಿಐ ಪಕ್ಷವು ಕೊನೆಯ ಹಂತದಲ್ಲಿ ಸ್ಪರ್ಧೆಯಿಂದ ಹಿಂಜರಿದಿದ್ದು, ಖಾತೆ ತೆರೆಯಲು ಪರದಾಡುತ್ತಿರುವ ಕಾಂಗ್ರೆಸ್ ಗೆ ಅನುಕೂಲಕರ ವಾತಾವರಣ ಸೃಷ್ಟಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಡಿಪಿಐ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದ ಆನಂದ ಮಿತ್ತಬೈಲ್, 2103 ರ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷದ ಸ್ಪರ್ಧೆಯಿಂದ ಬಿಜೆಪಿಗೆ ಅನುಕೂಲಕರವಾಗಿತ್ತು. ಈ ಚುನಾವಣೆಯಲ್ಲೂ ಜಾತ್ಯಾತೀತ ಮತಗಳು ವಿಭಜನೆಯಾಗಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಕೊನೆಯ ಕ್ಷಣದಲ್ಲಿ ಸುಳ್ಯ ಕ್ಷೇತ್ರದಲ್ಲಿ ಎಸ್ಡಿಪಿಐ ಸ್ಪರ್ಧೆಯಿಂದ ಹಿಂದೆ ಸರಿಯಲಾಗಿದೆ ಎಂದಿದ್ದಾರೆ.

Also Read  ಉಳ್ಳಾಲ: ಆಸ್ಪತ್ರೆಗೆ ತಪಾಸಣೆಗೆಂದು ಬಂದ ಕಾಮುಕನಿಂದ ನರ್ಸ್ ಗೆ ಕಿರುಕುಳ ➤ ಆರೋಪಿಯ ಬಂಧನ

error: Content is protected !!
Scroll to Top