(ನ್ಯೂಸ್ ಕಡಬ) newskadaba.com, ಅ.08: ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಅ.7ರವರೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊರತುಪಡಿಸಿ ಶೇ. 83.22 ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.
ಅ. 7ರಂದು ಸಮೀಕ್ಷೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದ್ದರೂ ಅನೇಕ ಜಿಲ್ಲೆಗಳಲ್ಲಿ ಸಮೀಕ್ಷೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯ ಅವಧಿಯನ್ನು ಅ.18ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಅ.7 ರಂದು ಮಂಗಳವಾರ ಸಂಜೆ ವೇಳೆಗೆ 3,57,197 ಕುಟುಂಬಗಳ ಸಮೀಕ್ಷೆ ನಡೆದಿದೆ. ಒಟ್ಟು 1,19,65,700 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ.83.22 ರಷ್ಟು ಪ್ರಗತಿ ಸಾಧಿಸಲಾಗಿದೆ.
ಒಟ್ಟು ಒಟ್ಟು 1,43,77,978 ಕುಟುಂಬಗಳ ಸಮೀಕ್ಷೆಯ ಗುರಿ ನಿಗದಿ ಪಡಿಸಲಾಗಿತ್ತು. ಸೋಮವಾರದವರೆಗೆ 1,16,08,503 (ಶೇ.80.39 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿತ್ತು. ಮಂಗಳವಾರ 3,57,197 ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಈವರೆಗೆ ಒಟ್ಟು 4,47,34,261 ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದೆ.
ಅ.4ರಿಂದ ಜಿಬಿಎ (ಬೆಂಗಳೂರು) ವ್ಯಾಪ್ತಿಯಲ್ಲಿ ಸಮೀಕ್ಷೆ ಶುರು ಮಾಡಿದ್ದು, 39,82,335 ಕುಟುಂಬಗಳ ಸಮೀಕ್ಷೆ ಗುರಿ ನಿಗದಿಪಡಿಸಲಾಗಿದೆ. ಮಂಗಳವಾರ 1,37,714 ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಈವರೆಗೆ 4,12,004 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








