(ನ್ಯೂಸ್ ಕಡಬ) newskadaba.com, ಅ.09 ಬೆಳಗಾವಿ: ಪತ್ನಿಯನ್ನು ಕೊಂದು ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ (20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
4 ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. 3 ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ.
ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಮತ್ತು ಗೋಕಾಕ್ ಡಿವೈಎಸ್ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ..








