ನೆಲ್ಯಾಡಿ: ನೇಣುಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.24. ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನೆಲ್ಯಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ನೆಲ್ಯಾಡಿಯ ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಶಿರಾಡಿ ನಿವಾಸಿ ಪ್ರಕಾಶ್ ಎಂಬವರ ಪುತ್ರಿ ಅನು(18) ಎಂದು ಗುರುತಿಸಲಾಗಿದೆ. ಈಕೆ ಸೋಮವಾರ ರಾತ್ರಿ ತನ್ನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top