ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ



(ನ್ಯೂಸ್ಕಡಬ) newskadaba.com,  .09: ತಮಿಳುನಾಡಿನ ಮಧುರೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಮಾಹಿತಿ ಬಂದ ತಕ್ಷಣವೇ, ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಭದ್ರತಾ ತಪಾಸಣೆ ಹಾಗೂ ಶೋಧ ಕಾರ್ಯಗಳನ್ನು ತ್ವರಿತವಾಗಿ ಆರಂಭಿಸಿದ್ದಾರೆ.





ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳನ್ನು ಸ್ಥಳಕ್ಕೆ ಆಗಮಿಸಿ ವಿಮಾನ ನಿಲ್ದಾಣದ ಆವರಣದ ಎಲ್ಲ ಭಾಗಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಎಲ್ಲಾ ಪ್ರವೇಶ ವಾಹನಗಳನ್ನು ತಪಾಸಣೆಗೆ ಒಳಪಡಿಸಿದರು. ಈ ಸಂದರ್ಭ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.






ಇದಕ್ಕೂ ಮೊದಲು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಇದೇ ರೀತಿಯ ಬೆದರಿಕೆ ಇಮೇಲ್ ಬಂದಿತ್ತು. ಬೆಳಿಗ್ಗೆ 6 ಗಂಟೆಗೆ ಬಂದ ಅನಾಮಧೇಯ ಇಮೇಲ್‌ನಲ್ಲಿ, ವಿಮಾನ ನಿಲ್ದಾಣದ ಜೊತೆಗೆ ಹೈದರಾಬಾದ್‌ನ ಹಲವು ಶಾಲೆಗಳಲ್ಲಿಯೂ ಸ್ಫೋಟಕಗಳನ್ನು ಇಡಲಾಗಿದೆ ಎಂಬ ಆರೋಪ ಮಾಡಲಾಗಿತ್ತು. ಇದರ ಪ್ರತಿಕ್ರಿಯೆಯಲ್ಲಿ ಆರ್‌ಜಿಐಎ ಮತ್ತು ಸ್ಥಳೀಯ ಪೊಲೀಸ್ ಇಲಾಖೆ ಶೋಧ ಕಾರ್ಯಾಚರಣೆ ಕೈಗೊಂಡಿತು. ಈ ಸ್ಥಳದಲ್ಲಿಯೂ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲವೆಂದು ದೃಢಪಡಿಸಲಾಗಿದೆ.

error: Content is protected !!
Scroll to Top