(ನ್ಯೂಸ್ ಕಡಬ) newskadaba.com, ಅ.10 ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ….
ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ ಕ್ರೇಜ್ ಮಾತ್ರ ಕಡಿಮೆ ಆಗಿಲ್ಲ.
ಇನ್ನು ಬೆಳ್ಳಿ ಒಂದು ವರ್ಷದಲ್ಲಿ 75% ಏರಿಕೆಯಾಗಿದೆ. ಹಿಂದಿನ ಯಾವ ವರ್ಷಗಳಲ್ಲೂ ಆಗದ ಬೆಲೆ ಏರಿಕೆ ಕಳೆದ ಅಕ್ಟೋಬರ್‌ನಿಂದ ಈ ವರ್ಷ ಅಕ್ಟೋಬರ್‌ನಲ್ಲಿ ಆಗಿದೆ. ದೀಪಾವಳಿ ಹಾಗೂ ಈಗಾಗಲೇ ಮದುವೆ ಸೀಜನ್ ಆರಂಭವಾಗಿದ್ದು, ಮಧ್ಯಮ ವರ್ಗ ಹಾಗೂ ಬಡವರ್ಗದ ಮಹಿಳೆಯರಿಗೆ ಬಂಗಾರ ಕೊಳ್ಳಂಗಿಲ್ಲ, ಮುಟ್ಟಂಗಿಲ್ಲ ಎನ್ನುವಂತಾಗಿದೆ.













