(ನ್ಯೂಸ್ ಕಡಬ) newskadaba.com, ಅ.10: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ.
ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ ನಡವಳಿ ಪ್ರತಿ, ಕ್ಯಾಲೆಂಡರ್ ಆಫ್ ಇವೆಂಟ್, ಸಂಘಗಳ ನೋಂದಣಿ ಕಾಯಿದೆ 1960ರಡಿ ಸಕ್ಷಮ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಷನ್ ನವೀಕರಿಸಿರುವ ಪ್ರತಿ ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ.








