2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ



(ನ್ಯೂಸ್ಕಡಬ) newskadaba.com,  .10 : 2005 ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.







ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಸಂದರ್ಭ ದಲ್ಲಿ ಸಿದ್ದರಾಮಯ್ಯ ಅವರು, ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸ ಲಾಗುವುದು. ಅರ್ಹರು ಭೂಮಿ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗು ವುದು ಎಂದು ಆಶ್ವಾಸನೆ ನೀಡಿದ್ದಾರೆ.






ಅರಣ್ಯ ಭೂಮಿಯಲ್ಲಿನ ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿ 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಮರುಸಮೀಕ್ಷೆ ನಡೆಸುವುದು ಸೇರಿದಂತೆ, ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನದಿಂದ ಜಿಲ್ಲೆಯ ಜನರಿಗೆ ಭೂಮಿಯ ಹಕ್ಕು ಕೊಡಿಸಬೇಕೆಂದು ನಿಯೋಗ ಮುಖ್ಯ ಮಂತ್ರಿ ಅವರನ್ನು ಒತ್ತಾಯಿಸಿತು. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸರಕಾರದ ಮುಂದೆ ವಿವಿಧ ರಚನಾತ್ಮಕ ಸಲಹೆಗಳನ್ನು ನಮ್ಮ ಹೋರಾಟ ಸಮಿತಿ ಸರ್ಕಾರದ ಮುಂದೆ ಮಂಡಿಸಿತು ಎಂದು ಚಂದ್ರಕಾಂತ ಕೊಚರೇಕರ ತಿಳಿಸಿದರು.

error: Content is protected !!
Scroll to Top