ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು



(ನ್ಯೂಸ್ಕಡಬ) newskadaba.com,  .10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ.





ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌ ಉಮೇಶ್‌ ಅವರ ಪೂರ್ಣ ಹೆಸರು ಮೈಸೂರು ಶ್ರೀಕಂಠಯ್ಯ ಉಮೇಶ್. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಆರೋಗ್ಯ ಸಮಸ್ಯೆಯ ಕಾರಣದಿಂದ ಕೆಲವು ಸಮಯಗಳಿಂದ ಅವರು ಬಣ್ಣ ಹಚ್ಚಿಲ್ಲ.






error: Content is protected !!
Scroll to Top