(ನ್ಯೂಸ್ ಕಡಬ) newskadaba.com, ಅ.11 ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ (ಅಕ್ಟೋಬರ್ 11) ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ
ಶುಕ್ರವಾರ(ಅ.10) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಕೆಲವೆಡೆ ಹಗುರ ವರ್ಷಧಾರೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ…
ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ನಗರ/ಗ್ರಾಮಾಂತರ), ತುಮಕೂರು, ರಾಮನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಜೋರಾದ ಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.













