ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ – News Kadaba

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ : ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ರವರನ್ನು ಬಂಧನ ಮಾಡಲಾಗಿದೆ.ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ತನಿಖಾ ಸಂಸ್ಥೆ ಈ ವರ್ಷದ ಜುಲೈನಲ್ಲಿ ದಾಳಿಗಳನ್ನು ನಡೆಸಿತ್ತು.

ರಿಲಯನ್ಸ್‌ ಪವರ್‌ನ ಅಂಗ ಸಂಸ್ಥೆಯಾದ ರಿಲಯನ್ಸ್ ಎನ್‌ಯು ಬಿಇಎಸ್‌ಎಸ್‌ ಲಿಮಿಟೆಡ್‌ಗಾಗಿ ಭಾರತೀಯ ಸೌರ ಇಂಧನ ನಿಗಮಕ್ಕೆ ₹68.2 ಕೋಟಿ ಮೌಲ್ಯದ ಬ್ಯಾಂಕ್ ಗ್ಯಾರಂಟಿ ನೀಡಿದ್ದು, ಅದು ನಕಲಿ ಎಂಬ ಆರೋಪ ಅಶೋಕ್ ಪಾಲ್ ಮೇಲಿದೆ. ಈ ಕಂಪನಿಯು ಈ ಹಿಂದೆ ಮಹಾರಾಷ್ಟ್ರ ಎನರ್ಜಿ ಜನರೇಷನ್ ಲಿಮಿಟೆಡ್‌ ಎಂದು ಗುರುತಿಸಿಕೊಂಡಿತ್ತು

Scroll to Top