ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಅ .13. ಬೆಂಗಳೂರು : – ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ.

2ನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ ಭೇಟಿ ಪರಿಶೀಲಿಸುವಂತೆ ಸೂಚನೆ ನೀಡಿತ್ತು.
ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ದರ್ಶನ್ ಇರುವ ಕ್ವಾರೆಂಟೈನ್ ಸೆಲ್‌ನ ಪರಿಶೀಲನೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ತಲೆ ದಿಂಬು, ಹಾಸಿಗೆ ನೀಡಲಾಗಿದೆಯೇ ಜೈಲಿನ ಮ್ಯಾನ್ಯುವಲ್ ಅಡಿ ನೀಡಲಾಗಿರುವ ಯಾವುವು ಹೀಗೆ ಅಧಿಕಾರಿಗಳು ಎಲ್ಲದರ ವರದಿ ಪಡೆಯಲಿದ್ದಾರೆ.
ಆ ಬಳಿಕ ಕಾನೂನು ಸೇವಾ ಅಧಿಕಾರಿಯು ದರ್ಶನ್ ಹೇಳಿಕೆ ಪಡೆಯಲಿದ್ದಾರೆ. ಈ ವರದಿಯನ್ನು ಅ.೧೮ರ ಒಳಗೆ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ, ವರದಿ ಸಿದ್ಧಪಡಿಸಲು ಅಧಿಕಾರಿಗಳು ಸಂಚು ಮಾಡಿದ್ದಾರೆ.

Scroll to Top