ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ



(ನ್ಯೂಸ್ಕಡಬ) newskadaba.com,   .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು ಸೇತುವೆಗಳಿಗೆ ಭಾರಿ ಹಾನಿ ಸಂಭವಿಸಿದೆ. ಆಗಸ್ಟ್ ತಿಂಗಳ ಬೆಳೆ ಹಾನಿ ಸಮೀಕ್ಷಾ ವರದಿ ಈಗಾಗಲೇ ಲಭ್ಯವಾಗಿದೆ. ಇನ್ನೂ 2-3 ದಿನಗಳಲ್ಲಿ ಸೆಪ್ಟೆಂಬರ್ ತಿಂಗಳ ಸಮೀಕ್ಷಾ ವರದಿ ಸಹ ಲಭ್ಯವಾಗಲಿದೆ ಎಂದು ತಿಳಿಸಿದರು.
ಅತಿವೃಷ್ಟಿಯಿಂದ ಹಾಳಾದ, ಹಾನಿಗೊಳಗಾದ ರಸ್ತೆ ಹಾಗೂ ಸೇತುವೆ ಕುಸಿತ ಸ್ಥಳಗಳಲ್ಲಿ ತುರ್ತು ಮರು ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರದಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಸೇರಿದಂತೆ ತಾಲ್ಲೂಕು ಅನುಷ್ಠಾನ ಅಧಿಕಾರಿಗಳು ಇದ್ದರು.





error: Content is protected !!
Scroll to Top