(ನ್ಯೂಸ್ ಕಡಬ) newskadaba.com ಅ. 14. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ.
ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.
ನವೆಂಬರ್ 9ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಾರ್ತಾ ಭವನದಲ್ಲಿ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮತದಾರರ ಪಟ್ಟಿಯನ್ನು ವಾರ್ತಾಭವನದಲ್ಲಿ ಪ್ರಕಟಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ, ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ













