RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ



(ನ್ಯೂಸ್ಕಡಬ) newskadaba.com . 14. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಾಗಿ ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಸೂಚನೆ ನೀಡಿದ್ದಾರೆ.





ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ.






ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.

error: Content is protected !!
Scroll to Top