ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ – News Kadaba

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗಾಂಜಾ ಸಾಗಿಸುತ್ತಿದ್ದ ಪ್ರಯಾಣಿಕನ ಬಂಧನ

crime, arrest, suspected

(ನ್ಯೂಸ್‌ ಕಡಬ) newskadaba.com  ಅ. 14. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನ ಚೆಕ್-ಇನ್ ಬ್ಯಾಗೇಜ್‌ ನಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಕಂಡುಬಂದಿದ್ದು, ಸಿಐಎಸ್‌ಎಫ್ ಆತನನ್ನು ಬಂಧಿಸಿದ ಘಟನೆ ನಡೆದಿದೆ.

 

ಮೂಲಗಳ ಪ್ರಕಾರ, ಅಕ್ಟೋಬರ್ 13 ರಂದು ಸಂಜೆ 6.10ಕ್ಕೆ ಮುಂಬೈನಿಂದ ಇಂಡಿಗೋ ವಿಮಾನದಲ್ಲಿ ಬಂದ ಶಂಕರ್ ನಾರಾಯಣ್ ಪೊದ್ದಾರ್ ಎಂಬ ಪ್ರಯಾಣಿಕನ ಬಳಿ ಮಾದಕ ವಸ್ತುಗಳು ಇರಬಹುದು ಎಂಬ ಮಾಹಿತಿ ಬಂದ  ಮೇರೆಗೆ ಕಾರ್ಯಚರಣೆ ನಡೆಸಿದ ಸಿಐಎಸ್‌ಎಫ್‌ ನ ಸಿಐಡಬ್ಲ್ಯೂ ತಂಡ, ಆತನ ಲಗೇಜ್‌ ನಲ್ಲಿದ್ದ ಸುಮಾರು 512 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿ, ಪ್ರಯಾಣಿಕನನ್ನು ಬಂಧಿಸಿದ್ದಾರೆ.

ನಂತರ ಸಿಐಎಸ್‌ಎಫ್ ಬೆಂಗಳೂರಿನ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಮತ್ತು ಸ್ಥಳೀಯ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜ್ಪೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Scroll to Top