ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ…

. ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆಯನ್ನು ಗುರುತಿಸಿ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯು ಸಾಮಾಜಿಕ ಅಭಿವೃದ್ಧಿ ಮತ್ತು ಲಿಂಗ ಸಮಾನತೆ ತರುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ನ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅದರ ಜತೆಗೆ 1997ರಿಂದ 2025ರ ಅ. 3ರವರೆಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯನ್ನೂ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಿ ಪ್ರಮಾಣಪತ್ರ ನೀಡಲಾಗಿದೆ. ಈ ದಾಖಲೆಯು ಬೆಂಗಳೂರು, ಕರ್ನಾಟಕ ಮತ್ತು ಭಾರತವನ್ನು ವಿಶ್ವ ಮಟ್ಟದಲ್ಲಿ ಛಾಪು ಮೂಡಿಸಿದೆ ಎಂದು ಶ್ಲಾಘಿಸಲಾಗಿದೆ.

Scroll to Top