ಇಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ



(ನ್ಯೂಸ್ಕಡಬ) newskadaba.com  ಅ. 15. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ, ಫಾದರ್ ಮುಲ್ಲರ್ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ -2025” ಅಕ್ಟೋಬರ್ 15 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸಿನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ  ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಉದ್ಘಾಟಿಸಲಿದ್ದಾರೆ. ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೇವ್ ಫಾ.ಫಾಸ್ಟಿನ್ ಲೂಕಸ್ ಲೋಬೋ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಡಾ.ಅರುಣಾ ಯಾಡಿಯಾಲ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





error: Content is protected !!
Scroll to Top