ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ – News Kadaba

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ

(ನ್ಯೂಸ್‌ ಕಡಬ) newskadaba.com,  ಅ.15  ಬೆಂಗಳೂರು : ಈ ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಪಾಸ್ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

Scroll to Top