ಇದುವರೆಗೆ 6.40 ಲಕ್ಷ ಮಂದಿ ಭಕ್ತರಿಂದ ಹಾಸನಾಂಬ ದೇವಿಯ ದರ್ಶನ



(ನ್ಯೂಸ್‌ ಕಡಬ) newskadaba.com ಅ. 15. ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನದ 6ನೇ ದಿನವಾದ ಇಂದೂ ಸಹ ಸಾಗರೋಪಾಧಿಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ನಿರಂತರ ದರ್ಶನ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ದರ್ಶನ ಪಡೆಯಲಿದ್ದಾರೆ. ಇಂದೂ ಸಹ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ದೇವಾಲಯದ ಆವರಣ ಹಾಗೂ ಸುತ್ತಮುತ್ತ ಸರಥಿ ಸಾಲುಗಳಲ್ಲಿ ನಿಂತಿದ್ದ ಭಕ್ತರನ್ನು ಮಾತನಾಡಿಸಿ ಮೂಲಸೌಕರ್ಯಗಳ ಪರಿಶೀಲನೆ ನಡೆಸಿದರು.







ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಐದು ದಿನಗಳಿಂದ 6,40,700 ಮಂದಿ ದರ್ಶನ ಮಾಡಿದ್ದಾರೆ. ಇಂದು ಬೆಳಗ್ಗೆ ಒಂದು ಲಕ್ಷದ 1,22,600 ಮಂದಿ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು .






ಇಂದು ಒಂದೇ ದಿನ ಭಕ್ತರ ಸಂಖ್ಯೆ 2.50 ಲಕ್ಷ ದಾಟಬಹುದು ಎಂದ ಅವರು ಎಷ್ಟೇ ಜನ ಬಂದರೂ ಎಲ್ಲರಿಗೂ ಸುಗಮ ದರ್ಶನವಾಗಲಿದೆ. ಎಲ್ಲಾ ವ್ಯವಸ್ಥೆ ಸರಿಯಾಗಿದ್ದು ದರ್ಶನ ಪಡೆಯಲು ಜನರಿಗೆ ಸ್ವಲ್ಪ ಸಮಯ ಹೆಚ್ಚಾಗಲಿದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಗಂಟೆ ಸಮಯ ತಗುಲುತ್ತಿದ್ದು ಮುಂದಿನ ದಿನಗಳಲ್ಲಿ ಬರುವವರು ನಾಲ್ಕರಿಂದ ಐದು ಗಂಟೆ ಸರತಿ ಸಾಲಿನಲ್ಲಿ ನಿಲ್ಲಲು ತಯಾರಾಗಿ ಬರುವಂತೆ ಸಲಹೆ ನೀಡಿದರು.

error: Content is protected !!
Scroll to Top