ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ ► ಸಾರ್ವಜನಿಕರು ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿದ್ದರಿಂದ ಹೈರಾಣಾದ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ತೇಳುತ್ತಿರುವುದನ್ನು ಕಂಡು ಕುತೂಹಲದಿಂದ ವಾಹನಗಳನ್ನು ಸೇತುವೆಯಲ್ಲೇ ನಿಲ್ಲಿಸಿ ಸಾರ್ವಜನಿಕರು ನದಿಗೆ ಇಣುಕಿ ನೋಡುತ್ತಿದ್ದುದರಿಂದಾಗಿ ಕೆಲಕಾಲ ಸಂಚಾರ ದಟ್ಟಣೆ ಉಂಟಾದ ಘಟನೆ ಗುರುವಾರದಂದು ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ.

ನದಿಯಲ್ಲಿ ಮೃತದೇಹವೊಂದು ತೇಲುತ್ತಿರುವುದು ಸೇತುವೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ನಡುವೆ ಮೃತದೇಹ ತೇಲುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುತೂಹಲದಿಂದ ವಾಹನ ಪ್ರಯಾಣಿಕರು ಸೇತುವೆಯಲ್ಲಿ ವಾಹನಗಳನ್ನು ನಿಲ್ಲಿಸಿ ನದಿಗೆ ಇಣುಕಿ ನೋಡಲು ಆರಂಭಿಸಿದ್ದಾರೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಬಳಿಕ ಸಂಚಾರಿ ಪೊಲೀಸರು ಯಥಾಸ್ಥಿತಿಗೆ ತರಲು ಹರಸಾಹಸ ಪಟ್ಟರು. ಅಪರಿಚಿತ ಮೃತದೇಹ ಯಾರದೆಂದು ಪರಿಶೀಲಿಸಲಾಗುತ್ತಿದ್ದು, ಮೇಲಕ್ಕೆತ್ತಲು ಕ್ರಮ ಕೈಗೊಳ್ಳಲಾಗುತ್ತಿದೆ.

Also Read  ಸುಬ್ರಹ್ಮಣ್ಯ: ಅರ್ನಾಬ್ ಗೋಸ್ವಾಮಿಯ ಬಂಧನ ವಿರೋಧಿಸಿ ABVP ವತಿಯಿಂದ ಪ್ರತಿಭಟನೆ

error: Content is protected !!
Scroll to Top