ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇಂದಿನ ಹವಮಾನ ವರದಿ – News Kadaba

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ.

ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ನಗರ/ಗ್ರಾಮಾಂತರ) ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ತೀವ್ರ ವರ್ಷಧಾರೆ ಸುರಿಯಲಿದೆ.

 

Scroll to Top