(ನ್ಯೂಸ್ ಕಡಬ) newskadaba.com, ಅ.17: ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದು, ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.
ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು. ಕಾರ್ಯಕ್ರಮದಲ್ಲಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಹ ಭಾಗವಹಿಸಿದ್ದರು.












