ಜಾತಿಗಣತಿ ಸಮೀಕ್ಷೆ ವಿರುದ್ಧ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಸಿದ್ದರಾಮಯ್ಯ ಮನವಿ



(ನ್ಯೂಸ್ಕಡಬ) newskadaba.com,  ಅ.18 ಬೆಂಗಳೂರು : ರಾಜ್ಯದ ಜನರ ಸಮಸ್ಯೆಗಳನ್ನು ತಿಳಿದು ಯೋಜನೆ ರೂಪಿಸುವ ಸಲುವಾಗಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಮಾಡಲಾಗುತ್ತಿದ್ದು, ಎಲ್ಲರೂ ತಪ್ಪದೆ ಭಾಗವಹಿಸಬೇಕು. ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಸಮೀಕ್ಷೆ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಯಾರೂ ಕಿವಿಗೊಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದಾರೆ.





ತಮ್ಮ ಎಕ್ಸ್‌ ಖಾತೆಯಲ್ಲಿ ಈ ಬಗ್ಗೆ ಸರಣಿ ಪೋಸ್ಟ್‌ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕುರಿತು ಎದ್ದಿರುವ ಗೊಂದಲ ಮತ್ತು ನಡೆಯುತ್ತಿರುವ ಅಪಪ್ರಚಾರ ನಿವಾರಣೆಗೆ ಪ್ರಯತ್ನಿಸಿದ್ದಾರೆ. ಈ ದಿಸೆಯಲ್ಲಿ ಸರಣಿ ಪ್ರಶ್ನೆಗಳು ಹಾಕಿಕೊಂಡು ಅದಕ್ಕೆ ಉತ್ತರ ರೂಪದ ವಿವರಣೆ ನೀಡಲಾಗಿದೆ. ಈ ವಿವರಣೆ ನೀಡುವ ಸಂದರ್ಭದಲ್ಲಿ ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿರುವುದನ್ನು ಕೆಲ ರಾಜಕಾರಣಿಗಳು ಸ್ವಾರ್ಥಕ್ಕಾಗಿ ವಿರೋಧಿಸಿದ್ದಾರೆ ಎಂದು ಟೀಕಿಸಿದ್ದಾರೆ.






ಇತ್ತೀಚೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ನಿವಾಸಕ್ಕೆ ಬಂದಿದ್ದ ಸಮೀಕ್ಷೆದಾರರಿಗೆ 60 ಪ್ರಶ್ನೆಗಳು ಏಕಿವೆ ಎಂದು ಪ್ರಶ್ನಿಸಿದ್ದರು. ಇದೀಗ ಮುಖ್ಯಮಂತ್ರಿ ಇಂಥ ಪ್ರಶ್ನೆ ಕೇಳುತ್ತಿರುವವರು ಸ್ವಾರ್ಥ ರಾಜಕಾರಣಿಗಳು ಎಂದಿರುವುದು ಕುತೂಹಲ ಮೂಡಿಸಿದೆ

 

 

error: Content is protected !!
Scroll to Top