ಇಂದಿನ ಹವಾಮಾನ ವರದಿ



(ನ್ಯೂಸ್ಕಡಬ) newskadaba.com,  .18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ ನೀಡಲಾಗಿದೆ.





ಅ.18ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.






ಅ. 19ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅ.20ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು, ಹಾಸನ, ಕೊಡಗು, ಮೈಸೂರು ಸೇರ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

error: Content is protected !!
Scroll to Top