“ಪ್ರಗತಿಯ ಪಕ್ಷ ಕರ್ನಾಟಕ” ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ► ಮತ್ತೆ ಜನಾರ್ದನ ಪೂಜಾರಿ ಕಣಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.27. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ “ಪ್ರಗತಿಯ ಪಕ್ಷ ಕರ್ನಾಟಕ” 2018 – 2023 ನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳೂರಿನ ಟಿಎಂಎ ಪೈ ಕನ್ವೆನ್‌ಶನ್ ಹಾಲ್‌ನಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು.

ಪ್ರಣಾಳಿಕೆಯ ಮೊದಲ ಪ್ರತಿಯನ್ನು ಹಿರಿಯ ಮುಖಂಡ ಜನಾರ್ದನ ಪೂಜಾರಿಯವರಿಗೆ ಹಸ್ತಾಂತರಿಸುವ ಮೂಲಕ ರಾಹುಲ್ ವಿದ್ಯುಕ್ತವಾಗಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಮುಖಂಡರಾದ ಸಂಸದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಅಧ್ಯಕ್ಷ ಡಾ.ಎಂ.ವೀರಪ್ಪ ಮೊಯ್ಲಿ, ಕೆಪಿಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿ.ಕೆ.ಹರಿಪ್ರಸಾದ್, ಪಕ್ಷದ ಜಿಲ್ಲಾ ಉಸ್ತುವಾರಿ ವಿಷ್ಣುನಾಥನ್, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಶಾಸಕರಾದ ಮೊಯ್ದಿನ್ ಬಾವಾ, ಜೆ.ಆರ್.ಲೋಬೋ ಮೊದಲಾದವರು ಉಪಸ್ಥಿತರಿದ್ದರು.

Also Read  ವಿಟ್ಲ: ಆಡು ಕಳ್ಳತನ ಮಾಡುತ್ತಿದ್ದ ಯುವಕರು ಪೊಲೀಸ್ ವಶಕ್ಕೆ...!

error: Content is protected !!
Scroll to Top