ಮರಳು ಸಾಗಾಟದ ಲಾರಿ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.27. ಮರಳು ಸಾಗಾಟದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರದಂದು ನಡೆದಿದೆ.

ಮೃತ ಸವಾರನನ್ನು ಕುಂಪಲ ಆಶ್ರಯ ಕಾಲನಿ ನಿವಾಸಿ ವಿನೀತ್ ರಾಜ್(25) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟುವಿನಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಹೆಚ್ಚಿನ ಘನ ವಾಹನಗಳು ಇಲ್ಲಿನ ಬಸ್ ನಿಲ್ದಾಣದ ರಸ್ತೆಯಲ್ಲೇ ಸಂಚರಿಸುತ್ತಿದ್ದು, ಇದರಿಂದಾಗಿ ಟಿಪ್ಪರ್ ಬೈಕಿಗೆ ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Scroll to Top