ಇಂದು ಕರ್ನಾಟದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್



(ನ್ಯೂಸ್ಕಡಬ) newskadaba.com,  ..24 ಬೆಂಗಳೂರು: ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.






ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗಲಿದೆ.

 

error: Content is protected !!
Scroll to Top