ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ



(ನ್ಯೂಸ್ಕಡಬ) newskadaba.com,  ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.





ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಬಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 29°C ಇರುವ ಸಾಧ್ಯತೆ ಇದೆ.






error: Content is protected !!
Scroll to Top