ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ – News Kadaba

ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಅ. 28  ಬೆಂಗಳೂರು:  ಅಕ್ಟೋಬರ್​ 28: ಕರ್ನಾಟದಲ್ಲಿ ವರುಣಾರ್ಭಟ  ಹೆಚ್ಚಿರಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದೆಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ. ಬೆಂಗಳೂರಿನಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ 30-40 ಕೀಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ , ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Scroll to Top