ನಾಳೆ (ಎಪ್ರಿಲ್ 30) ದ್ವಿತೀಯ ಪಿಯುಸಿ ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.29. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವು ಏ.30 ಸೋಮವಾರದಂದು ಪ್ರಕಟವಾಗಲಿದ್ದು, ಮೇ 01 ರಂದು ಕಾಲೇಜುಗಳಲ್ಲಿ ಫಲಿತಾಂಶದ ಸಂಪೂರ್ಣ ವಿವರ ದೊರೆಯಲಿದೆ.

ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜಿನ ಒಟ್ಟು 6.80 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದು, ಉತ್ತರ ಪತ್ರಿಕೆ ಮೌಲ್ಯಮಾಪನ ಪೂರ್ಣಗೊಂಡಿದೆ. ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಿಕೊಂಡಿದ್ದು, ಫಲಿತಾಂಶವನ್ನು ಶಿಕ್ಷಣ ಇಲಾಖೆಯ ವೆಬ್‌ಸೈಟ್ karresults.nic.in ಮತ್ತು pue.kar.nic.in ನಲ್ಲಿ ಪಡೆಯಬಹುದಾಗಿದೆ‌. ಸೋಮವಾರ ಅಪರಾಹ್ನದಿಂದ ವೆಬ್‌ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪಿಯು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Also Read  ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

error: Content is protected !!
Scroll to Top