ಮಂಗಳೂರು: ಲಾರಿ – ಬೈಕ್ ಢಿಕ್ಕಿ ► ಸವಾರ ಮೃತ್ಯು, ಸಹ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.29. ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಪಂಪ್‌ವೆಲ್ ನಲ್ಲಿ ಭಾನುವಾರದಂದು ನಡೆದಿದೆ.

ಮೃತ ಸವಾರನನ್ನು ತೊಕ್ಕೊಟ್ಟು ಸಮೀಪದ ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಸಹ ಸವಾರ ಪುನೀತ್ ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಸರಕು ಸಾಗಾಟದ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ.

Scroll to Top