ಉಡುಪಿ: ಪೆಂಡಾಲ್ ಸಾಗಾಟದ ಲಾರಿ ಪಲ್ಟಿ – ಮೂವರು ಮೃತ್ಯು ► ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ

(ನ್ಯೂಸ್ ಕಡಬ) newskadaba.com ಉಡುಪಿ, ಎ.29. ಕಾರ್ಯಕ್ರಮಕ್ಕೆ ಹಾಕುವ ಪೆಂಡಲ್ ಸಾಗಿಸುತ್ತಿದ್ದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಅಸ್ಸಾಂ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಭಾನುವಾರದಂದು ಪೆರ್ಡೂರಿನಲ್ಲಿ ಸಂಭವಿಸಿದೆ.

ಮೇ 01 ರಂದು ಉಡುಪಿಯ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಪೆಂಡಲ್ ಸಾಗಿಸುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ ಟೆಂಪೋದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಹಿರಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಮರ್ಧಾಳ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ಘೋಷಣೆ ಕೂಗಿದ ಪ್ರಕರಣ - ಮತ್ತೋರ್ವ ಆರೋಪಿಯ ಬಂಧನ

 

error: Content is protected !!
Scroll to Top