(ನ್ಯೂಸ್ ಕಡಬ) newskadaba.com ಕಡಬ, ಎ.29. ಆಲ್ಟೋ ಕಾರೊಂದು ಚಾಲಕಿಯ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ಬಳಿಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಭಾನುವಾರ ಅಪರಾಹ್ನ ನಡೆದಿದೆ.

ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿನ್ನು ಮಹಿಳೆ ಚಲಾಯಿಸುತ್ತಿದ್ದು, ಪಕ್ಕದಲ್ಲೇ ಮಗು ಇತ್ತೆನ್ನಲಾಗಿದೆ. ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಮಹಿಳೆ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ.










