ಮರ್ಧಾಳ: ಬೈಕ್ – ಬೈಕ್ ಢಿಕ್ಕಿ ► ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಎ.29. ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕಿಗೆ ಹಿಂದಿನಿಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪಾಲೆತ್ತಡ್ಕ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮರ್ಧಾಳದಿಂದ ಇಚಿಲಂಪಾಡಿ ಕಡೆಗೆ ತೆರಳುತ್ತಿದ್ದ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದುದರಿಂದಾಗಿ ಈ ಘಟನೆ ಸಂಭವಿಸಿದೆ.

error: Content is protected !!
Scroll to Top