ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ – News Kadaba

ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ

(ನ್ಯೂಸ್‌ ಕಡಬ) newskadaba.com,  ಅ..31: ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ: 22.09.2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ:31.10.2025 ರಂದು ಮುಕ್ತಾಯಗೊಳ್ಳಲಿದೆ.

ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಅವಕಾಶ ನೀಡುವ ಹಿನ್ನೆಲೆಯಲ್ಲಿ https://kscbcselfdeclaration.karnataka.gov.in Online ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ: 10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

Scroll to Top