ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನಾಳೆ (ಮೇ.01) ಬೆಳ್ಳಾರೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.30. ಕೆಲವು ದಶಕಗಳ ಸೋಲಿನಿಂದ ಕಂಗಾಲಾಗಿ ಈ ಬಾರಿ ಸುಳ್ಯ ಕ್ಷೇತ್ರವನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ನಾಳೆ (ಮೇ 01) ರಂದು ಬೆಳ್ಳಾರೆಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ ವೀರಪ್ಪ ಮೊಯ್ಲಿ ಭಾಗವಹಿಸಲಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಸತತ ಸೋಲುಣ್ಣುತ್ತಿರುವ ಕಾಂಗ್ರೆಸ್ ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕೆಂದು ಸಿದ್ಧತೆ ಮಾಡಿಕೊಂಡಿದ್ದು, ಅದರಂತೆ ಮಂಗಳವಾರದಂದು ಬೆಳ್ಳಾರೆಯ ಕಾಮಧೇನು ಟವರ್ಸ್‌ ನಲ್ಲಿ ನಡೆಯುವ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ವೀರಪ್ಪ ಮೊಯ್ಲಿ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗವಹಿಸಲಿದ್ದಾರೆ. ಈ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

Also Read  ಮೀನುಗಾರಿಕೆಗೆ ತೆರಳಿದ್ದ ಬೋಟ್ ಬಂಡೆಗೆ ಢಿಕ್ಕಿ ➤ ಐವರು ಮೀನುಗಾರರ ರಕ್ಷಣೆ

error: Content is protected !!
Scroll to Top