ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ – News Kadaba

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ.

ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದಲ್ಲದೆ, ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ–ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

ವಿವಿಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಚಿಂತನೆ

ಏತನ್ಮಧ್ಯೆ ವಿಶ್ವಗುರು, ಸಾಂಸ್ಕೃತಿಕ ನಾಯಕ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್‌, ಡಿ. ದೇವರಾಜ ಅರಸು ಸೇರಿದಂತೆ ಹಲವು ಗಣ್ಯಮಾನ್ಯರ ಹೆಸರನ್ನ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಿಗೆ ನಾಮಕರಣ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪರಿಶೀಲಿಸಿ, ಸೂಕ್ತ ಪ್ರಸ್ತಾವನೆಯನ್ನ ಮುಂದಿನ ಸಚಿವ ಸಂಪುಟದ ಮುಂದೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Scroll to Top