ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ – News Kadaba

11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್‌ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.03 ಬೆಂಗಳೂರು:- ಪದವಿ ಕಾಲೇಜುಗಳ ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್‌ ಪರೀಕ್ಷೆಯು ಕ್ಯಾಮೆರಾ ಕಣ್ಗಾವಲಿನಲ್ಲಿ ಇಂದು ನಡೆಯಿತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡು, ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿತ್ತು.

ಒಟ್ಟು 33 ವಿಷಯಗಳಿಗೆ ನಡೆದ ಕೆ-ಸೆಟ್‌ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದರು. ಬೆಂಗಳೂರು ಸೇರಿದಂತೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಪರೀಕ್ಷೆಯನ್ನು ಪ್ರಾಧಿಕಾರ ನಡೆಸಿದೆ.
ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆಯಿತು,ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆದಿವೆ.

ಈ ಪರೀಕ್ಷೆಗಳಿಗೆ ನೆಗೆಟಿವ್‌ ಮೌಲ್ಯಮಾಪನ ಇರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ. ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಲಾಗಿತ್ತು.

Scroll to Top