(ನ್ಯೂಸ್ ಕಡಬ) newskadaba.com, ನ.03 ಬೆಂಗಳೂರು:ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷೀಣ ಒಳನಾಡು ಪ್ರದೇಶಗಳ ಕೆಲ ಪ್ರದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆಯಿರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದ ಭಾಗದಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 10 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












