ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ – News Kadaba

ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.04: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ ಇಂದು ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ  ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಹೆಚ್.ವೈ. ಮೇಟಿ (  ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.

ಈ ಹಿಂದೆ 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಆ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಕ್ಯಾಬಿನೆಟ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Scroll to Top