ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು



(ನ್ಯೂಸ್‌ ಕಡಬ) newskadaba.com,  ನ.04 ಕೊಯಮತ್ತೂರು: ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್‌ ಮಾಡಿದ್ದಾರೆ.







ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಹೊತ್ತ ಮೂವರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದಲ್ಲದೆ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ನಗರದ ವಿಮಾನ ನಿಲ್ದಾಣದ ಹತ್ತಿರ ಈ ಆಘಾತಕಾರಿ ಘಟನೆ ನಡೆದಿದೆ.






ಸೋಮವಾರ, ವಿಶೇಷ ಪೊಲೀಸ್ ತಂಡಗಳು ದೇವಸ್ಥಾನದ ಬಳಿ ತವಾಸಿ, ಕರುಪ್ಪಸ್ವಾಮಿ ಮತ್ತು ಕಾಳೀಶ್ವರನ್ ಎಂದು ಗುರುತಿಸಲಾದ ಆರೋಪಿಗಳನ್ನು ಸುತ್ತುವರೆದರು. ಈ ಸಮಯದಲ್ಲಿ ಆರೋಪಿಗಳು, ಅಧಿಕಾರಿಗಳ ಮೇಲೆ ಕುಡುಗೋಲುಗಳಿಂದ ಹಲ್ಲೆ ನಡೆಸಿದರು. ಇದರಿಂದ ಹೆಡ್‍ಕಾನ್ಸ್ಟೇಬಲ್ ಚಂದ್ರಶೇಖರ್ ಅವರ ಎಡ ಮಣಿಕಟ್ಟು ಮತ್ತು ತೋಳಿನ ಮೇಲೆ ಗಾಯವಾಗಿದೆ. ಆರೋಪಿಗಳು ಹಲ್ಲೆ ನಡೆಸುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ಅವರ ಮೇಲೆ ಫೈರಿಂಗ್ ಮಾಡಿದ್ದಾರೆ.

 

 

error: Content is protected !!
Scroll to Top